ಪಾರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು 7 ವಿಕೆಟ್ ಗಳಿಂದ ಸೋಲುವುದರೊಂದಿಗೆ ಏಕದಿನ ಸರಣಿಯನ್ನೂ ಕಳೆದುಕೊಂಡ ಟೀಂ ಇಂಡಿಯಾ ಪ್ರದರ್ಶನ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಕೋಚ್ ಆಗಿ ಆಯ್ಕೆಯಾದಾಗ ಅವರ ಮೇಲೆ ಭಾರೀ ನಿರೀಕ್ಷೆಯಿತ್ತು. ಆದರೆ ಈಗ ಅವರ ನೇತೃತ್ವದಲ್ಲಿ ಆಡಿದ ಮೂರು ಸರಣಿಗಳ ಪೈಕಿ ಎರಡರಲ್ಲಿ ಸೋಲು ಅನುಭವಿಸಿದೆ. ಅದರಲ್ಲೂ ಟೆಸ್ಟ್ ಸರಣಿ ಬಳಿಕ ಇದೀಗ ಏಕದಿನ ಸರಣಿಯನ್ನೂ ಸೋತಿರುವುದು