ಲಂಡನ್: ಟೀಂ ಇಂಡಿಯಾ ವಿರುದ್ಧ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೂ ಮೊದಲು ನ್ಯೂಜಿಲೆಂಡ್ ಗೆ ನಾಯಕ ಕೇನ್ ವಿಲಿಯಮ್ಸನ್ ರೂಪದಲ್ಲಿ ಆಘಾತ ಸಿಕ್ಕಿದೆ.ಇಂಗ್ಲೆಂಡ್ ವಿರುದ್ಧ ಪ್ರಸಕ್ತ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಕೇನ್ ವಿಲಿಯಮ್ಸನ್ ಬೆರಳಿನ ಗಾಯಕ್ಕೊಳಗಾಗಿದ್ದಾರೆ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ.ಇದೀಗ ಅವರ ಗಾಯ ಗಂಭೀರವಾದರೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಿಂದಲೂ ಹೊರಗುಳಿಯಬೇಕಾದ ಪರಿಸ್ಥಿತಿ ಬರಬಹುದು. ಹೀಗಾಗಿ ಇದು ನ್ಯೂಜಿಲೆಂಡ್ ತಂಡಕ್ಕೆ ಆಘಾತ ತಂದಿದೆ.