ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ದ್ವಿತೀಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆರಿಸಿಕೊಂಡಿದೆ.ಕಳೆದ ಪಂದ್ಯದಂತೇ ಈ ಪಂದ್ಯದಲ್ಲೂ ಮತ್ತೆ ಮೊದಲು ಫೀಲ್ಡಿಂಗ್ ಮಾಡಲು ಕೊಹ್ಲಿ ನಿರ್ಧರಿಸಿದ್ದಾರೆ. ಅಚ್ಚರಿಯೆಂದರೆ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಈ ಪಂದ್ಯಕ್ಕೂ ಉಳಿಸಿಕೊಂಡಿದ್ದಾರೆ.ಕಳೆದ ಪಂದ್ಯದಲ್ಲಿ ದುಬಾರಿ ಎನಿಸಿದ್ದ ಕೃನಾಲ್ ಪಾಂಡ್ಯಗೆ ಕೊಕ್ ನೀಡಿ ಯಜುವೇಂದ್ರ ಚಾಹಲ್ ಗೆ ಸ್ಥಾನ ನೀಡಬಹುದು ಎಂಬ ನಿರೀಕ್ಷೆ ಸುಳ್ಳಾಗಿದೆ.