ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಕಾರು ಅಪಘಾತಕ್ಕೀಡಾಗಿ ಇಂದಿಗೆ ಒಂದು ವರ್ಷವಾಗಿದೆ. ಈಗ ತನ್ನ ಪರಿಸ್ಥಿತಿ ಬಗ್ಗೆ ರಿಷಬ್ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.ದೆಹಲಿ-ಡೆಹ್ರಾಡೂನ್ ರಸ್ತೆಯಲ್ಲಿ ತಡ ರಾತ್ರಿ ತಮ್ಮ ಮನೆಗೆ ತೆರಳುತ್ತಿದ್ದಾಗ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ರಿಷಬ್ ಗಂಭೀರ ಗಾಯಗೊಂಡಿದ್ದರು. ಆಗ ಅವರ ಜೊತೆ ಬೇರೆ ಯಾರೂ ಇರಲಿಲ್ಲ. ಕೊನೆಗೆ ರಸ್ತೆಯಲ್ಲೇ ಸಾಗುತ್ತಿದ್ದ ಬಸ್ ಚಾಲಕ ಮತ್ತು ನಿರ್ವಾಹಕ ರಿಷಬ್ ಪಂತ್ ರನ್ನು