ದುಬೈ: ಐಸಿಸಿ ಟಿ20 ವಿಶ್ವಕಪ್ ನಲ್ಲಿ ಭಾರತ ಇಂದು ಮೊದಲ ಪಂದ್ಯವನ್ನು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಆಡುತ್ತಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾ ಆಡುವ ಅಂತಿಮ ಬಳಗ ಹೇಗಿರಬಹುದು ಎಂದು ನೋಡೋಣ. ಟೀಂ ಇಂಡಿಯಾ ಈ ಪಂದ್ಯದಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಜೊತೆಗೆ ಕೆಎಲ್ ರಾಹುಲ್ ರನ್ನು ಕಣಕ್ಕಿಳಿಸಬಹುದು. ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಆಡಿದರೆ ಇಶಾನ್ ಕಿಶನ್ ಗೆ ನಾಲ್ಕನೇ ಕ್ರಮಾಂಕ ಸಿಗುವ ಸಾಧ್ಯತೆಯಿದೆ. ಹೀಗಾದಲ್ಲಿ ಸೂರ್ಯಕುಮಾರ್ ಯಾದವ್