ರಾಜ್ ಕೋಟ್: ಪೃಥ್ವಿ ಶಾ.. ಈ ಹೆಸರು ದೇಶೀಯ ಕ್ರಿಕೆಟ್ ನಲ್ಲಿ ಭಾರೀ ಸದ್ದು ಮಾಡಿತ್ತು. ದೇಶೀಯ ಕ್ರಿಕೆಟ್ ನಲ್ಲಿ ಇವರು ಆಡುತ್ತಿದ್ದ ಪರಿ ನೋಡಿ ಆಗಲೇ ಹಲವರು ಈ ಹುಡಗನನ್ನು ಸಚಿನ್ ತೆಂಡುಲ್ಕರ್ ಗೆ ಹೋಲಿಸಿದ್ದರು.ನಿರೀಕ್ಷೆಗಳ ಮೂಟೆಯನ್ನೇ ಹೊತ್ತು ಚಿಕ್ಕ ವಯಸ್ಸಿನಲ್ಲೇ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಪೃಥ್ವಿ ಶಾ ಆ ನಿರೀಕ್ಷೆಗಳನ್ನು ಹುಸಿಗೊಳಿಸಲಿಲ್ಲ. ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವಾಡುವ