ಮುಂಬೈ: ಮುಂಬರುವ ಟಿ20 ವಿಶ್ವಕಪ್ ಬಳಿಕ ಕೋಚ್ ಸ್ಥಾನದಿಂದ ರವಿಶಾಸ್ತ್ರಿ ಕೆಳಗಿಳಿಯಲಿದ್ದು, ಅವರ ಸ್ಥಾನಕ್ಕೆ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಯಾರು ಆಯ್ಕೆಯಾಗುತ್ತಾರೆ ಎಂಬ ಬಗ್ಗೆ ಚರ್ಚೆ ನಡೆದಿದೆ. ಈ ನಡುವೆ ‘ವಾಲ್’ ರಾಹುಲ್ ದ್ರಾವಿಡ್ ಮುಂದಿನ ಕೋಚ್ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳಿಬಂದಿದೆ. ಮೊದಲು ಕೋಚ್ ಹುದ್ದೆ ನಿರಾಕರಿಸಿದ್ದ ದ್ರಾವಿಡ್ ಈಗ ಒಪ್ಪಿಗೆ ನೀಡಿದ್ದಾರೆ. ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ಮಾಧ್ಯಮವೊಂದು