ಬೆಂಗಳೂರು: ಮಹಿಳೆಯರ ಬಗ್ಗೆ ಅಸಭ್ಯ ಕಾಮೆಂಟ್ ಮಾಡಿ ಟೀಂ ಇಂಡಿಯಾದಿಂದ ನಿಷೇಧಕ್ಕೊಳಗಾಗಿರುವ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಬಗ್ಗೆ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಪ್ರತಿಕ್ರಿಯಿಸಿದ್ದಾರೆ.ಸಂದರ್ಶನವೊಂದರಲ್ಲಿ ಈ ಪ್ರಶ್ನೆ ಎದುರಾದಾಗ ದ್ರಾವಿಡ್ ಈ ಇಬ್ಬರು ಕ್ರಿಕೆಟಿಗರ ಪ್ರಕರಣದ ಬಗ್ಗೆ ತಮ್ಮ ಅಭಿಪ್ರಾಯವೇನೆಂದು ಹೇಳಿದ್ದಾರೆ. ಈ ಪ್ರಕರಣದ ಬಗ್ಗೆ ಅತಿಯಾಗಿ ಪ್ರತಿಕ್ರಿಯಿಸುವುದು ಬೇಡ ಎಂದೂ ದ್ರಾವಿಡ್ ಸಲಹೆ ನೀಡಿದ್ದಾರೆ.ಆಟಗಾರರು ಹಿಂದೆಂದೂ ತಪ್ಪು ಮಾಡಿಲ್ಲ ಎಂದಲ್ಲ. ಮುಂದೆಯೂ ತಪ್ಪು ಮಾಡಲ್ಲ ಎಂದಲ್ಲ.