ಲಕ್ನೋ: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ಮೊದಲ ಏಕದಿನ ಲಕ್ನೋದಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ.ಪ್ರಮುಖರ ಅನುಪಸ್ಥಿತಿಯಲ್ಲಿ ಭಾರತ ಇಂದು ಎ ದರ್ಜೆಯ ತಂಡದೊಂದಿಗೆ ಕಣಕ್ಕಿಳಿಯುತ್ತಿದೆ. ಹೀಗಾಗಿ ಯುವ ಪಡೆಗೆ ಸಾಮರ್ಥ್ಯ ಸಾಬೀತುಪಡಿಸಲು ಅವಕಾಶ ಸಿಗಲಿದೆ.ಆದರೆ ಹವಾಮಾನ ವರದಿ ಪ್ರಕಾರ ಇಂದು ಲಕ್ನೋದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಇಂದಿನ ಪಂದ್ಯ ನಡೆಯುವುದು ಅನುಮಾನವಾಗಿದೆ. Edited by Rajesh Patil