Photo Courtesy: Twitterಅಡಿಲೇಡ್: ಭಾರತ-ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಟಿ20 ವಿಶ್ವಕಪ್ ನಲ್ಲಿ ಎರಡನೇ ಇನಿಂಗ್ಸ್ ವೇಳೆ ಮಳೆ ಕಾಣಿಸಿಕೊಂಡಿದೆ. ಇದರಿಂದಾಗಿ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕೆಎಲ್ ರಾಹುಲ್ (50), ವಿರಾಟ್ ಕೊಹ್ಲಿ (64) ಅರ್ಧಶತಕಗಳ ನೆರವಿನಿಂದ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು. ಅಂತೂ ರಾಹುಲ್ ಫಾರ್ಮ್ ಗೆ ಬಂದಿದ್ದು ಎಲ್ಲರಿಗೂ ಸಮಾಧಾನ ತಂದಿತ್ತು.