ಪುಣೆ: ನಿರೀಕ್ಷಿಸಿದಂತೆಯೇ ಕರ್ನಾಟಕ ಮಹಾರಾಷ್ಟ್ರ ವಿರುದ್ಧ ರಣಜಿ ಟ್ರೋಫಿ ಪಂದ್ಯದಲ್ಲಿ ಇನಿಂಗ್ಸ್ ಅಂತರದಿಂದ ಗೆಲುವು ಸಾಧಿಸಿದೆ. ಇದರೊಂದಿಗೆ ಈ ಋತುವಿನಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ನಿನ್ನೆ 4 ವಿಕೆಟ್ ಕಳೆದುಕೊಂಡು ದಿನದಾಟ ಮುಗಿಸಿದ್ದ ಮಹಾರಾಷ್ಟ್ರ ಇಂದು 247 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿದೆ. ಇದರೊಂದಿಗೆ ಇನಿಂಗ್ಸ್ ಮತ್ತು 136 ರನ್ ಗಳ ಅಂತರದಿಂದ ಸೋಲುಂಡಿದೆ.ಕರ್ನಾಟಕ ಪರ ನಾಯಕ ವಿನಯ್ ಕುಮಾರ್ ಮಾರಕ ದಾಳಿ ಸಂಘಟಿಸಿ 6 ವಿಕೆಟ್ ಕಬಳಿಸಿದರು.