ಕಾನ್ಪುರ: ಉತ್ತರ ಪ್ರದೇಶ ಮತ್ತು ಕರ್ನಾಟಕ ನಡುವಿನ ರಣಜಿ ಟ್ರೋಫಿ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯಗೊಂಡಿದೆ. ಆದರೆ ಈ ಪಂದ್ಯದೊಂದಿಗೆ ರಾಜ್ಯದ ಹುಡುಗರು ಕ್ವಾರ್ಟರ್ ಫೈನಲ್ ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಅಂತಿಮ ದಿನವಾದ ಇಂದು ಕರ್ನಾಟಕ ದ್ವಿತೀಯ ಇನಿಂಗ್ಸ್ ನಲ್ಲಿ ಬಿರುಸಿನ 262 ರನ್ ಗಳಿಸಿತು. ಅದೂ ವಿಕೆಟ್ ನಷ್ಟವಿಲ್ಲದೇ. ಮೊದಲ ಇನಿಂಗ್ಸ್ ನಲ್ಲಿ ಶತಕ ವಂಚಿತರಾಗಿದ್ದ ಮಯಾಂಕ್ ಅಗರ್ವಾಲ್ ಈ ಇನಿಂಗ್ಸ್ ನಲ್ಲಿ ಶತಕ ದಾಖಲಿಸಿದರು. ಮಯಾಂಕ್