ಬೆಂಗಳೂರು: ರಣಜಿ ಟ್ರೋಫಿ ಕ್ರಿಕೆಟ್ ಸೆಮಿಫೈನಲ್ ಪಂದ್ಯದಲ್ಲಿ ಸೌರಾಷ್ಟ್ರ ವಿರುದ್ಧ ಕರ್ನಾಟಕ ಮೊದಲ ದಿನದಂತ್ಯಕ್ಕೆ 9 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಕರ್ನಾಟಕಕ್ಕೆ ಆರಂಭದಲ್ಲಿಯೇ ಆಘಾತ ಸಿಕ್ಕಿತು. ರವಿಕಾಂತ್ ಸಮರ್ಥ್, ಮಯಾಂಕ್ ಅಗರ್ವಾಲ್, ಕೆ ಸಿದ್ಧಾರ್ಥ್, ಕರುಣ್ ನಾಯರ್ ಒಂದಂಕಿ ಮೊತ್ತಕ್ಕೆ ಔಟಾಗಿ ಕರ್ನಾಟಕದ ಕುಸಿತಕ್ಕೆ ಕಾರಣರಾದರು.ಬಳಿಕ ಕೆಳಕ್ರಮಾಂಕದಲ್ಲಿ ನಾಯಕ ಮನೀಶ್ ಪಾಂಡೆ (62) ಶ್ರೇಯಸ್ ಗೋಪಾಲ್ (87) ಗಳಿಸಿ ತಂಡಕ್ಕೆ ಚೇತರಿಕೆ