ರಾಜ್ ಕೋಟ್: ಸೌರಾಷ್ಟ್ರ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 217 ರನ್ ಗಳಿಗೆ ಆಲೌಟ್ ಆಗಿ ಹಿನ್ನಡೆ ಅನುಭವಿಸಿದೆ.ಮೊದಲ ಇನಿಂಗ್ಸ್ ನಲ್ಲಿ ಸೌರಾಷ್ಟ್ರ316 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ಆರಂಭ ಉತ್ತಮವಾಗಿತ್ತು. ಇನ್ ಫಾರ್ಮ್ ಬ್ಯಾಟ್ಸ್ ಮನ್ ದೇಗಾ ನಿಶ್ಚಲ್ 58 ರನ್ ಗಳಿಸಿದರು. ನಂತರ ಬಂದ ಕರುಣ್ ನಾಯರ್ (63) ಜತೆಗೆ ಉತ್ತಮ ಜತೆಯಾಟವಾಡುತ್ತಿದ್ದರು. ಆದರೆ ಇವರಿಬ್ಬರ