ಮುಂಬೈ: ಟೀಂ ಇಂಡಿಯಾ ಕೋಚ್ ಆಗಿದ್ದಾಗ ಅನಿಲ್ ಕುಂಬ್ಳೆ ಮತ್ತು ನಾಯಕ ವಿರಾಟ್ ಕೊಹ್ಲಿ ನಡುವಿನ ವೈಮನಸ್ಯ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಈ ವೈಮನಸ್ಯಕ್ಕೆ ನಿಜ ಕಾರಣವೇನೆಂದು ಟೀಂ ಇಂಡಿಯಾ ಮಾಜಿ ಮ್ಯಾನೇಜರ್ ರತ್ನಾಕರ್ ಶೆಟ್ಟಿ ತಮ್ಮ ಹೊಸ ಪುಸ್ತಕದಲ್ಲಿ ಬಹಿರಂಗಪಡಿಸಿದ್ದಾರೆ.ವಿರಾಟ್ ಕೊಹ್ಲಿ ಕೋಚ್ ಅನಿಲ್ ಕುಂಬ್ಳೆ ಮೇಲೆ ಅಸಮಾಧಾನಗೊಳ್ಳಲು ಕಾರಣವೇನೆಂದು ರತ್ನಾಕರ್ ಶೆಟ್ಟಿ ಬರೆದುಕೊಂಡಿದ್ದಾರೆ. ಆಟಗಾರರಿಗೆ ಬೆಂಬಲವಾಗಿ ನಿಲ್ಲದ ಕಾರಣಕ್ಕೆ ಕುಂಬ್ಳೆ ಮೇಲೆ ಕೊಹ್ಲಿ ಅಸಮಾಧಾನಗೊಂಡಿದ್ದರು ಎಂದು ಅವರು