ಮುಂಬೈ: ಟೀಂ ಇಂಡಿಯಾದಲ್ಲಿ ಸಾಕಷ್ಟು ಅವಕಾಶ ಸಿಕ್ಕರೂ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿರುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಮೇಲೆ ಟೀಕಾಪ್ರಹಾರವಾಗುತ್ತಿದೆ. ಇದೀಗ ಯುವ ವಿಕೆಟ್ ಕೀಪರ್ ಪರವಾಗಿ ಕೋಚ್ ರವಿಶಾಸ್ತ್ರಿ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.