ಮುಂಬೈ: ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ತಮ್ಮ ಬಗ್ಗೆ ಬಂದಿರುವ ವದಂತಿಗಳಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.ಪದೇ ಪದೇ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಜಡೇಜಾ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಹೇಳುವ ಚಿಂತನೆಯಲ್ಲಿದ್ದಾರೆ ಎಂದು ಕಳೆದ ಕೆಲವು ದಿನಗಳಿಂದ ಸುದ್ದಿ ಓಡಾಡುತ್ತಿದೆ.ಈ ಬಗ್ಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿರುವ ಜಡೇಜಾ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ‘ಇನ್ನೂ ಸಾಕಷ್ಟು ದೂರ ಕ್ರಮಿಸಬೇಕಿದೆ’ ಎಂದು ಬರೆದುಕೊಂಡಿರುವ ಜಡೇಜಾ