ಚೆನ್ನೈ: ವರ್ಷದ ಕ್ರಿಕೆಟಿಗನಾಗಿ ಆಯ್ಕೆಯಾದ ಬಳಿಕ ಟೀಂ ಇಂಡಿಯಾ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ತಮ್ಮ ಯಶಸ್ಸಿಗೆ ಕಾರಣರಾದವರಿಗೆಲ್ಲಾ ಟ್ವಿಟರ್ ನಲ್ಲಿ ಧನ್ಯವಾದ ತಿಳಿಸಿದ್ದರು. ಆದರೆ ಏಕದಿನ ನಾಯಕ ಎಂಎಸ್ ಧೋನಿ ಹೆಸರು ಪ್ರಸ್ತಾಪಿಸದೇ ವಿವಾದಕ್ಕೆ ಕಾರಣವಾಗಿದ್ದರು. ಇದೀಗ ಈ ವಿವಾದಕ್ಕೆ ಇನ್ನೊಂದು ಟ್ವಿಸ್ಟ್ ಸಿಕ್ಕಿದೆ.ಧೋನಿ ಟೆಸ್ಟ್ ತಂಡದ ನಾಯಕನಾಗಿದ್ದಾಗ ಅಶ್ವಿನ್ ಗೆ ಬ್ಯಾಟಿಂಗ್ ಅವಕಾಶವನ್ನೇ ನೀಡುತ್ತಿರಲಿಲ್ಲ. ಆದಷ್ಟು ಕೆಳಕ್ರಮಾಂಕದಲ್ಲಿ ಆಡಿಸುತ್ತಿದ್ದರು. ಇದರಿಂದ ಅವರಿಗೆ ಹೆಚ್ಚು ರನ್ ಗಳಿಸುವ ಅವಕಾಶವೇ