Photo Courtesy: Twitterಬೆಂಗಳೂರು: ರಸ್ತೆ ಅಪಘಾತದಿಂದಾಗಿ ಕಾಲು ಮುರಿತಕ್ಕೊಳಗಾಗಿದ್ದ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ಈಗ ಅಭ್ಯಾಸಕ್ಕೆ ಮರಳಿದ್ದಾರೆ.ಅವಧಿಗೂ ಮುನ್ನವೇ ರಿಷಬ್ ಚೇತರಿಸಿಕೊಳ್ಳುತ್ತಿರುವುದು ಖುಷಿಯ ಸಂಗತಿಯಾಗಿದೆ. ಅವರ ಆರೋಗ್ಯದ ಬಗ್ಗೆ ಲೇಟೆಸ್ಟ್ ಅಪ್ ಡೇಟ್ ಕೊಟ್ಟಿರುವ ಬಿಸಿಸಿಐ ಎರಡನೇ ಬಾರಿ ಶಸ್ತ್ರಚಿಕಿತ್ಸೆ ಅಗತ್ಯವಿಲ್ಲವೆಂದು ವೈದ್ಯರು ತಿಳಿಸಿದ್ದಾಗಿ ಮಾಹಿತಿ ನೀಡಿದೆ.ಇದೀಗ ರಿಷಬ್, ಶಿಖರ್ ಧವನ್ ಬೆಂಗಳೂರಿನ ಎನ್ ಸಿಎಯಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.