ನವದೆಹಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಕ್ರಿಕೆಟಿಗ ರಿಷಬ್ ಪಂತ್ ಈಗ ಚೇತರಿಸಿಕೊಳ್ಳುತ್ತಿದ್ದು ಸದ್ಯದಲ್ಲಿಯೇ ತಂಡಕ್ಕೆ ವಾಪಸ್ ಆಗಲಿದ್ದಾರೆ.ಕಳೆದ ಡಿಸೆಂಬರ್ ನಲ್ಲಿ ರಿಷಬ್ ಚಲಿಸುತ್ತಿದ್ದ ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದು ಅವರು ಗಂಭಿರ ಗಾಯಗೊಂಡಿದ್ದರು. ಕಾಲಿಗೆ ಏಟು ಮಾಡಿಕೊಂಡಿದ್ದ ರಿಷಬ್ ಬಳಿಕ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ರಿಷಬ್ ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ.ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷ ಆರಂಭದಲ್ಲಿ ರಿಷಬ್ ಮತ್ತೆ ಸಕ್ರಿಯ ಕ್ರಿಕೆಟ್