ನವದೆಹಲಿ: ರಸ್ತೆ ಅಪಘಾತದಿಂದಾಗಿ ಕಳೆದ ಒಂದು ವರ್ಷದಿಂದ ಕ್ರಿಕೆಟ್ ನಿಂದ ದೂರವಿರುವ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ಐಪಿಎಲ್ ಗೆ ಮರಳಲಿದ್ದಾರೆ ಎಂಬ ಸುದ್ದಿಯಿತ್ತು.ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿ ರಿಷಬ್ ಈ ಬಾರಿ ಮತ್ತೆ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಓಡಾಡುತ್ತಿತ್ತು. ಅದಕ್ಕೆ ತಕ್ಕ ಹಾಗೆ ತಂಡದ ಮೆಂಟರ್ ಸೌರವ್ ಗಂಗೂಲಿ ಕೂಡಾ ರಿಷಬ್ ಐಪಿಎಲ್ ವೇಳೆಗೆ ಮರಳಬಹುದು ಎಂದಿದ್ದರು.ಇತ್ತೀಚೆಗೆ ಡೆಲ್ಲಿ ಕ್ಯಾಪಿಟಲ್ಸ್ ಕ್ಯಾಂಪ್ ನಲ್ಲಿ ರಿಷಬ್ ಅಭ್ಯಾಸ ನಡೆಸಿದ್ದರಿಂದ