ನವದೆಹಲಿ: ಮುಂಬೈ ಇಂಡಿಯನ್ಸ್ ಪರ ಐಪಿಎಲ್ ಆಡುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗ ರೋಹಿತ್ ಶರ್ಮಾ ಟಿ20 ಕ್ರಿಕೆಟ್ ಮಾದರಿಯಲ್ಲಿ ನೂತನ ದಾಖಲೆ ಬರೆದಿದ್ದಾರೆ.ಎಲ್ಲಾ ವರ್ಗದ ಟಿ20 ಕ್ರಿಕೆಟ್ ಮಾದರಿಯಲ್ಲಿ 300 ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ ಎಂಬ ದಾಖಲೆಗೆ ರೋಹಿತ್ ಪಾತ್ರರಾಗಿದ್ದಾರೆ. ಇಂದೋರ್ ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಈ ದಾಖಲೆ ಮಾಡಿದ್ದಾರೆ. ಈ ಪಂದ್ಯವನ್ನು ರೋಹಿತ್ 15 ಬಾಲ್ ಗಳಲ್ಲಿ 24 ರನ್ ಸಿಡಿಸಿದ್ದರು.