ಪರ್ಲ್: ದ.ಆಫ್ರಿಕಾ ವಿರುದ್ಧ ಮೂರನೇ ಏಕದಿನ ಪಂದ್ಯ ಕೇವಲ ಭಾರತಕ್ಕೆ ಮಾತ್ರವಲ್ಲ, ಸಂಜು ಸ್ಯಾಮ್ಸನ್ ವೃತ್ತಿ ಜೀವನಕ್ಕೂ ನಿರ್ಣಾಯಕವಾಗಿತ್ತು.ಸಂಜು ಸ್ಯಾಮ್ಸನ್ ಗೆ ಈಗಾಗಲೇ ಹಲವು ಅವಕಾಶಗಳು ಸಿಕ್ಕಿತ್ತು. ಹೆಚ್ಚಿನ ಸಂದರ್ಭದಲ್ಲಿ ಅವರಿಗೆ ತಂಡದಲ್ಲಿ ಅವಕಾಶ ಸಿಕ್ಕರೂ ಆಡುವ ಬಳಗದಲ್ಲಿ ಸ್ಥಾನ ಸಿಕ್ಕಿರಲಿಲ್ಲ.ಆಡುವ ಬಳಗದಲ್ಲಿ ಅವಕಾಶ ಸಿಕ್ಕಾಗಲೆಲ್ಲಾ ಅವರಿಗೆ ಅದಕ್ಕೆ ತಕ್ಕ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ. ಕಳೆದ ಎರಡು ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್ ವಿಫಲರಾಗಿದ್ದರು. ಹೀಗಾಗಿ ಅವರಿಗೆ ಮತ್ತೆ ಟೀಂ ಇಂಡಿಯಾದಲ್ಲಿ