ಮುಂಬೈ: ಟೀಂ ಇಂಡಿಯಾದಿಂದ ಕೈ ಬಿಟ್ಟಿದ್ದಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಕ್ಕೆ ಪತ್ರಕರ್ತರೊಬ್ಬರು ತನಗೆ ಬೆದರಿಕೆ ಸಂದೇಶ ಕಳುಹಿಸಿದ್ದನ್ನು ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಬಹಿರಂಗಪಡಿಸಿದ್ದರು. ಇದರ ಬೆನ್ನಲ್ಲೇ ಕ್ರಿಕೆಟಿಗರಾದ ಹರ್ಭಜನ್ ಸಿಂಗ್, ವೀರೇಂದ್ರ ಸೆಹ್ವಾಗ್ ಸಹಾಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.ಟೀಂ ಇಂಡಿಯಾದಿಂದ ಕೈ ಬಿಟ್ಟಿದ್ದರ ಬಗ್ಗೆ ಪ್ರತಿಕ್ರಿಯೆ ಕೊಡಿ ಎಂದಾಗ ಸಹಾ ಪ್ರತಿಕ್ರಿಯಿಸಲಿಲ್ಲ ಎಂಬ ಕಾರಣಕ್ಕೆ ಪತ್ರಕರ್ತರೊಬ್ಬರು ವೃದ್ಧಿಮಾನ್ ಸಹಾಗೆ ಬೆದರಿಕೆ ಸಂದೇಶ ಕಳುಹಿಸಿದ್ದರಂತೆ. ನೀವು ನನ್ನ ಕರೆಗೆ ಉತ್ತರಿಸದೇ ಅವಮಾನ