ಟ್ರಿನಿಡಾಡ್: ವೆಸ್ಟ್ ಇಂಡೀಸ್ ವಿರುದ್ಧ ದ್ವಿತೀಯ ಏಕದಿನ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಂಡ ಮೇಲೆ ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಂನಲ್ಲಿ ಸಂಭ್ರಮ ಮನೆ ಮಾಡಿತ್ತು. ಗೆಲುವಿನ ಬಳಿಕ ನಾಯಕ ಶಿಖರ್ ಧವನ್ ತಂಡದ ಸಹ ಆಟಗಾರರ ಜೊತೆ ಡ್ರೆಸ್ಸಿಂಗ್ ರೂಂನಲ್ಲಿ ಕುಣಿದು ಕುಪ್ಪಳಿಸಿದ್ದಾರೆ.ಗೆಲುವಿನ ಸಂಭ್ರಮದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಧವನ್ ಹಂಚಿಕೊಂಡಿದ್ದಾರೆ. ‘ಬ್ರಾವೋ’ ಎಂದು ಎಲ್ಲಾ ಆಟಗಾರರು ಜೊತೆಯಾಗಿ ಕುಣಿದು ಕುಪ್ಪಳಿಸಿದ ವಿಡಿಯೋವನ್ನು ಶೇರ್ ಮಾಡಿಕೊಂಡಿರುವ ಧವನ್