ಹರಾರೆ: ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಶುಬ್ನಂ ಗಿಲ್ ಚೊಚ್ಚಲ ಶತಕ ಸಿಡಿಸಿದ್ದಾರೆ.ಇತ್ತೀಚೆಗಿನ ವರದಿ ಬಂದಾಗ ಭಾರತ 5 ವಿಕೆಟ್ ನಷ್ಟಕ್ಕೆ 47 ಓವರ್ ಗಳಲ್ಲಿ 264 ರನ್ ಗಳಿಸಿದೆ. ಗಿಲ್ 89 ಎಸೆತಗಳಿಂದ 118 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.ಇದಕ್ಕೆ ಮೊದಲು ಆರಂಭಿಕರಾಗಿ ಕಣಕ್ಕಿಳಿದಿದ್ದ ಶಿಖರ್ ಧವನ್ 40, ಕೆಎಲ್ ರಾಹುಲ್ 30 ರನ್ ಗಳಿಸಿ ಉತ್ತಮ ಅಡಿಪಾಯ ಹಾಕಿಕೊಟ್ಟರು.