ಶುಬ್ನಂ ಗಿಲ್ ಆಡೋದು ಪಕ್ಕಾ, ಯಾವ ಕ್ರಮಾಂಕ ಅನ್ನೋದು ಸೀಕ್ರೆಟ್!

ಮುಂಬೈ| Krishnaveni K| Last Modified ಬುಧವಾರ, 24 ನವೆಂಬರ್ 2021 (09:00 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಶುಬ್ನಂ ಗಿಲ್ ಕಣಕ್ಕಿಳಿಯುವುದು ಪಕ್ಕಾ ಎಂದು ಉಪನಾಯಕ ಹೇಳಿಕೊಂಡಿದ್ದಾರೆ.

ಮಾಧ್ಯಮಗಳ ಮುಂದೆ ಮಾತನಾಡಿರುವ ಪೂಜಾರ, ಗಿಲ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವುದು ಖಚಿತ. ಆದರೆ ಯಾವ ಕ್ರಮಾಂಕದಲ್ಲಿ ಆಡುತ್ತಾರೆ ಎನ್ನುವುದು ಸಸ್ಪೆನ್ಸ್ ಆಗಿರಲಿದೆ ಎಂದಿದ್ದಾರೆ.


ಈ ಮೊದಲು ಗಿಲ್ ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಈಗ ಮಧ್ಯಮ ಕ್ರಮಾಂಕದಲ್ಲಿ ಬಳಕೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಹಾಗಿದ್ದರೆ ರಾಹುಲ್ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಆರಂಭಿಕರು ಯಾರಾಗಿರಬಹುದು ಎಂಬ ಕುತೂಹಲ ಎಲ್ಲರಲ್ಲಿದೆ.


ಇದರಲ್ಲಿ ಇನ್ನಷ್ಟು ಓದಿ :