ಜೊಹಾನ್ಸ್ ಬರ್ಗ್: ದ.ಆಫ್ರಿಕಾ ವಿರುದ್ಧ ಮಾನ ಉಳಿಸಿಕೊಳ್ಳಲು ಟೀಂ ಇಂಡಿಯಾಕ್ಕೆ ಏಕೈಕ ಟೆಸ್ಟ್ ಪಂದ್ಯ ಬಾಕಿಯಿದ್ದು, ಅದನ್ನು ಗೆದ್ದು ನಂ.1 ಪಟ್ಟ ಉಳಿಸಿಕೊಳ್ಳುವ ಒತ್ತಡದಲ್ಲಿದೆ. ಈ ಹಿನ್ನಲೆಯಲ್ಲಿ ಭಾರೀ ತಯಾರಿ ಮಾಡಿಕೊಳ್ಳುತ್ತಿರುವ ಟೀಂ ಇಂಡಿಯಾ ಆಟಗಾರರನ್ನೂ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.ಅಜಿಂಕ್ಯಾ ರೆಹಾನೆಯನ್ನು ಆಡಿಸದೇ ವಿರಾಟ್ ಕೊಹ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದಾರೆ. ಇದೀಗ ಎರಡೂ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಕಂಡ ಮೇಲೆ ಕೊಹ್ಲಿ ಹೆಚ್ಚುವರಿ ಬ್ಯಾಟ್ಸ್ ಮನ್ ಆಗಿ