ಮುಂಬೈ: ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗುತ್ತಿದ್ದಂತೇ ಮತ್ತೆ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಸರಣಿ ನಡೆಯುತ್ತಾ ಎಂಬ ಪ್ರಶ್ನೆ ಎದುರಾಗಿದೆ.ಇದೇ ಪ್ರಶ್ನೆಯನ್ನು ಗಂಗೂಲಿಗೆ ಕೇಳಿದಾಗ ಈ ವಿಚಾರವನ್ನು ನಿರ್ಧರಿಸುವವನು ನಾನಲ್ಲ. ಭಾರತದ ಪ್ರಧಾನಿ ಮೋದಿ ಮತ್ತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಿರ್ಧರಿಸಲಿದ್ದಾರೆ ಎಂದಿದ್ದಾರೆ.ಪುಲ್ವಾಮಾ ದಾಳಿಯ ಬಳಿಕ ಉಭಯ ದೇಶಗಳ ನಡುವಿನ ಕ್ರಿಕೆಟ್ ಬಾಂಧವ್ಯ ಸಂಪೂರ್ಣ ನಿಂತಿದೆ. ವಿಶ್ವಕಪ್ ನಲ್ಲಿಯೂ ಟೀಂ ಇಂಡಿಯಾ ಪಾಕ್ ವಿರುದ್ಧದ