ಕೊಲೊಂಬೊ: ಶ್ರೀಲಂಕಾ ವಿರುದ್ಧ ಐದನೇ ಪಂದ್ಯವನ್ನೂ ಆರು ವಿಕೆಟ್ ಗಳಿಂದ ಟೀಂ ಇಂಡಿಯಾ ತನ್ನ ತೆಕ್ಕೆಗೆ ಎಳೆದುಕೊಂಡಿದೆ. ಇದರೊಂದಿಗೆ ಐದು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಮತ್ತೆ ಚೇಸಿಂಗ್ ವೀರ ಎಂದು ಸಾಬೀತು ಪಡಿಸಿದ ನಾಯಕ ಕೊಹ್ಲಿ ಮತ್ತೊಂದು ಶತಕ ದಾಖಲಿಸಿದರು. 30 ನೇ ಏಕದಿನ ಶತಕ ದಾಖಲಿಸಿದ ಅವರು ಏಕದಿನ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಶತಕ ದಾಖಲಿಸಿದವರ ಪೈಕಿ ದ್ವಿತೀಯ ಸ್ಥಾನದಲ್ಲಿದ್ದ ರಿಕಿ ಪಾಂಟಿಂಗ್ ದಾಖಲೆಯನ್ನು