ನ್ಯಾಟಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಮೂರನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ ವೀರೋಚಿತವಾಗಿ 17 ರನ್ ಗಳಿಂದ ಸೋತಿದೆ.ಆದರೆ ಈ ಪಂದ್ಯದಲ್ಲಿ ಹೈಲೈಟ್ ಆಗಿದ್ದ ಸೂರ್ಯಕುಮಾರ್ ಯಾದವ್ ಏಕಾಂಗಿ ಹೋರಾಟ. ಇಂಗ್ಲೆಂಡ್ ನೀಡಿದ್ದ 216 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾಗೆ ಯಥಾವತ್ತು ಅಗ್ರ ಕ್ರಮಾಂಕದ ಬ್ಯಾಟಿಗರು ಕೈ ಕೊಟ್ಟರು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ತಲಾ 11 ರನ್ ಗಳಿಸಿ ಔಟಾದರು.