ದುಬೈ: ಟಿ20 ವಿಶ್ವಕಪ್ ಗೆ ಪೂರ್ವಭಾವಿಯಾಗಿ ನಡೆದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೊಂದು ಗೆಲುವು ಸಂಪಾದಿಸಿದೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಅಭ್ಯಾಸ ಪಂದ್ಯವನ್ನು ಟೀಂ ಇಂಡಿಯಾ 9 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 152 ರನ್ ಗಳ ಸಾಧಾರಣ ಮೊತ್ತ ಕಲೆ ಹಾಕಿತು.ಈ ಮೊತ್ತವನ್ನು ಬೆನ್ನತ್ತಿದ ಟೀಂ ಇಂಡಿಯಾಗೆ ಆರಂಭಿಕ ಕೆಎಲ್ ರಾಹುಲ್ ಮತ್ತು