ಡುಬ್ಲಿನ್: ಭಾರತ ಮತ್ತು ಐರ್ಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯವನ್ನು ಟೀಂ ಇಂಡಿಯಾ ರೋಚಕವಾಗಿ 4 ರನ್ ಗಳಿಂದ ಗೆಲ್ಲುವ ಮೂಲಕ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.ಈ ಪಂದ್ಯದಲ್ಲಿ ಎರಡೂ ತಂಡಗಳು 200 ಪ್ಲಸ್ ರನ್ ಗಳಿಸಿದ್ದು ಬ್ಯಾಟಿಂಗ್ ಅಬ್ಬರಕ್ಕೆ ಸಾಕ್ಷಿಯಾಗಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 225 ರನ್ ಗಳಿಸಿತು. ದೀಪಕ್ ಹೂಡಾ-ಸಂಜು ಸ್ಯಾಮ್ಸನ್ ದಾಖಲೆಯ ಜೊತೆಯಾಟವಾಡಿದರು.