ಮುಂಬೈ: ನ್ಯೂಜಿಲೆಂಡ್ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಆಡಲು ಟೀಂ ಇಂಡಿಯಾ ಮುಂಬೈ ಮಾರ್ಗವಾಗಿ ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದೆ. ಜೂನ್ 18 ರಿಂದ ಸೌಥಾಂಪ್ಟನ್ ನಲ್ಲಿ ನಡೆಯಲಿರುವ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಕೊಹ್ಲಿ ಪಡೆ ನ್ಯೂಜಿಲೆಂಡ್ ನ ಕೇನ್ ವಿಲಿಯಮ್ಸನ್ ಪಡೆಯನ್ನು ಎದುರಿಸಲಿದೆ.ಮುಂಬೈನಲ್ಲಿ ಕ್ವಾರಂಟೈನ್ ಅವಧಿ ಮುಗಿಸಿ ಟೀಂ ಇಂಡಿಯಾ ಕ್ರಿಕೆಟಿಗರು, ಸಹಾಯಕ ಸಿಬ್ಬಂದಿ ಮತ್ತು ಕುಟುಂಬಸ್ಥರು ಇಂಗ್ಲೆಂಡ್