ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದಿನಿಂದ ದ್ವಿತೀಯ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಪ್ಲೇಯಿಂಗ್ ಇಲೆವೆನ್ ಬಗ್ಗೆ ಚರ್ಚೆಗಳು ಆರಂಭವಾಗಿದೆ.ಮೊದಲ ಟೆಸ್ಟ್ ಪಂದ್ಯದಲ್ಲಿ ಸಂಘಟಿತ ಪ್ರದರ್ಶನ ನೀಡಿದ್ದ ಆಟಗಾರರನ್ನು ಈ ಪಂದ್ಯದಲ್ಲೂ ಬಹುತೇಕ ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚು. ವಿಶೇಷವಾಗಿ ಬೌಲರ್ ಗಳು ಎಲ್ಲರಿಂದಲೂ ಉತ್ತಮ ಪ್ರದರ್ಶನವೇ ಬಂದಿದೆ. ಹೀಗಾಗಿ ಬೌಲಿಂಗ್ ವಿಭಾಗದಲ್ಲಿ ಬದಲಾವಣೆಯಾಗುವ ಸಾಧ್ಯತೆ ಕಡಿಮೆ.ಇನ್ನು ಬ್ಯಾಟಿಂಗ್ ಕ್ರಮಾಂಕದಲ್ಲೂ ಚೇತೇಶ್ವರ ಪೂಜಾರ ಬಿಟ್ಟರೆ ಉಳಿದೆಲ್ಲರೂ ಸಮಾಧಾನಕರ ಪ್ರದರ್ಶನ ನೀಡಿದ್ದಾರೆ.