Photo Courtesy: Twitterಚಿತ್ತಗಾಂಗ್: ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ ಉತ್ತಮ ಮೊತ್ತದತ್ತ ಹೆಜ್ಜೆ ಹಾಕಿದೆ.ಎರಡನೇ ದಿನದ ಭೋಜನ ವಿರಾಮದ ವೇಳೆಗೆ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 348 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದೆ. ರವಿಚಂದ್ರನ್ ಅಶ್ವಿನ್ 40, ಕುಲದೀಪ್ ಯಾದವ್ 21 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.ನಿನ್ನೆ ಅಜೇಯರಾಗುಳಿದಿದ್ದ ಶ್ರೇಯಸ್ ಅಯ್ಯರ್ ಇಂದು ನಾಲ್ಕು ರನ್ ಸೇರಿಸುವಲ್ಲಿ ಔಟಾದರು.