ಮುಂಬೈ: ಇದುವರೆಗೆ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಆಯ್ಕೆಯಾದವರು ತಮ್ಮ ಸಹಾಯಕ ಸಿಬ್ಬಂದಿಗಳನ್ನೂ ತಮಗೆ ಇಷ್ಟ ಬಂದ ಹಾಗೆ ಆಯ್ಕೆ ಮಾಡಿಕೊಳ್ಳುತ್ತಿದ್ದರು. ತಮ್ಮ ಆಪ್ತರ ಬಳಗವನ್ನೇ ಬೌಲಿಂಗ್, ಫೀಲ್ಡಿಂಗ್ ಕೋಚ್ ಗಳಾಗಿ ತಾವೇ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಹಾಲಿ ಕೋಚ್ ರವಿಶಾಸ್ತ್ರಿ ಈ ಅಧಿಕಾರವನ್ನು ಚೆನ್ನಾಗಿಯೇ ಬಳಸಿಕೊಂಡಿದ್ದರು. ಕೋಚ್ ಆಯ್ಕೆ ಪ್ರಕ್ರಿಯೆ ಸಂದರ್ಭದಲ್ಲಿ ಬೌಲಿಂಗ್ ಕೋಚ್ ಆಗಿ ಮಾಜಿ ವೇಗಿ ಜಹೀರ್ ಖಾನ್ ರನ್ನು ಆಯ್ಕೆ ಸಮಿತಿ ಆಯ್ಕೆ ಮಾಡಿದ್ದರೂ