ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೂರನೇ ದಿನದಾಟದ ಊಟದ ವಿರಾಮದ ವೇಳೆಗೆ ದ್ವಿತೀಯ ಇನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿದೆ. ಟೀಂ ಇಂಡಿಯಾ ಇದರೊಂದಿಗೆ 351 ರನ್ ಗಳ ಮುನ್ನಡೆ ಸಾಧಿಸಿದೆ. ಈ ಮೂಲಕ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ. ಭಾರತದ ಪರ ನಾಯಕ ವಿರಾಟ್ ಕೊಹ್ಲಿ 38 ರನ್ ಮತ್ತು ರವಿಚಂದ್ರನ್ ಅಶ್ವಿನ್