ದುಬೈ: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ ಟೀಂ ಇಂಡಿಯಾ ನಂ.1 ಸ್ಥಾನಕ್ಕೇರಿದೆ. ಆಸ್ಟ್ರೇಲಿಯಾ ವಿರುದ್ಧ ಪಾಕಿಸ್ತಾನ ಸೋತ ಬೆನ್ನಲ್ಲೇ ಭಾರತಕ್ಕೆ ಲಾಭವಾಗಿದೆ.ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಸತತ ಎರಡು ವರ್ಷಗಳಿಂದ ಫೈನಲ್ ಗೇರಿರುವ ಭಾರತ ಎರಡು ಬಾರಿಯೂ ರನ್ನರ್ ಅಪ್ ಆಗಿತ್ತು. ಈಗ ಮತ್ತೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.ಪ್ರಸಕ್ತ ನಡೆಯುತ್ತಿರುವ ಪಾಕಿಸ್ತಾನ-ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯಲ್ಲಿ ಪಾಕ್ ಕನಿಷ್ಠ ಒಂದು ಪಂದ್ಯವನ್ನಾದರೂ ಗೆದ್ದರೆ ಮಾತ್ರ ಡಬ್ಲ್ಯುಟಿಸಿ