ಟ್ರೆಂಟ್ ಬ್ರಿಡ್ಜ್: ಇಂಗ್ಲೆಂಡ್ ವಿರುದ್ಧ ಎರಡು ಟೆಸ್ಟ್ ಪಂದ್ಯಗಳಲ್ಲಿ ಸೋತು ಟೀಕೆಗೆ ಗುರಿಯಾಗಿರುವ ಟೀಂ ಇಂಡಿಯಾ ನಾಳೆಯಿಂದ ಮೂರನೇ ಟೆಸ್ಟ್ ಗೆ ಅಣಿಯಾಗುತ್ತಿದೆ. ಎರಡು ಟೆಸ್ಟ್ ಪಂದ್ಯಗಳಲ್ಲಿ ತಂಡದ ಆಟಗಾರರ ಆಯ್ಕೆ ವಿಚಾರದಲ್ಲಿ ಟೀಕೆಗೊಳಗಾಗಿದ್ದ ನಾಯಕ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಮತ್ತೆ ಬದಲಾವಣೆ ಮಾಡುವ ಸಾಧ್ಯತೆಯಿದೆ.ಅದರಲ್ಲೂ ಮುಖ್ಯವಾಗಿ ವಿಕೆಟ್ ಕೀಪಿಂಗ್ ನಲ್ಲಿ ವೈಫಲ್ಯ ಅನುಭವಿಸಿರುವ ದಿನೇಶ್ ಕಾರ್ತಿಕ್ ಬದಲಿಗೆ ಯುವ ಕ್ರಿಕೆಟಿಗ ರಿಷಬ್ ಪಂತ್ ಸ್ಥಾನ ಪಡೆಯುವ