ದುಬೈ: ಟಿ20 ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಅಜೇಯವಾಗುಳಿಯುವ ಟೀಂ ಇಂಡಿಯಾ ಕನಸು ಭಗ್ನಗೊಂಡಿದೆ. ವಿಶ್ವಕಪ್ ನ ಮೊದಲ ಪಂದ್ಯದಲ್ಲೇ ಪಾಕಿಸ್ತಾನ ವಿರುದ್ಧ 10 ವಿಕೆಟ್ ಗಳ ಹೀನಾಯ ಸೋಲು ಅನುಭವಿಸಿ ಮುಖಭಂಗಕ್ಕೀಡಾಗಿದೆ.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿತು. ಈ ಪಿಚ್ ನಲ್ಲಿ ಇದು ಪೈಪೋಟಿಕರ ಮೊತ್ತವೇ ಆಗಿತ್ತು.ಆದರೆ ಟೀಂ ಇಂಡಿಯಾ ಬೌಲರ್ ಗಳು ಎದುರಾಳಿಗಳನ್ನು