ಲಂಡನ್: ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ನಡೆದ ಭಾರತ-ಇಂಗ್ಲೆಂಡ್ ಏಕದಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಗಳ ಶ್ರಮವನ್ನು ಬ್ಯಾಟಿಗರು ನೀರಿನಲ್ಲಿ ಹೋಮ ಮಾಡಿದಂತೆ ವ್ಯರ್ಥ ಮಾಡಿ ತಂಡದ ಸೋಲಿಗೆ ಕಾರಣವಾದರು.ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 49 ಓವರ್ ಗಳಲ್ಲಿ 246 ರನ್ ಗಳಿಗೆ ಆಲೌಟ್ ಆಯಿತು. ಜಾನಿ ಬೇರ್ ಸ್ಟೋ 38, ಲಿವಿಂಗ್ ಸ್ಟೋನ್ 33 ರನ್ ಗಳಿಸಿದರು. ಕೊನೆಯ ಕ್ರಮಾಂಕದಲ್ಲಿ ಮೊಯಿನ್ ಅಲಿ ಅಮೂಲ್ಯ