ಪುಣೆ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರನೇ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 43 ರನ್ ಗಳಿಂದ ಸೋತಿದೆ.ಯಾವತ್ತಿನಂತೆ ಕೊಹ್ಲಿ ಒನ್ ಮ್ಯಾನ್ ಶೋ ಈ ಬಾರಿ ಟೀಂ ಇಂಡಿಯಾ ಪಾಲಿಗೆ ವರ್ಕೌಟ್ ಆಗಲಿಲ್ಲ. ಮೊದಲು ಬ್ಯಾಟಿಂಗ್ ಮಾಡಿದ್ದ ವಿಂಡೀಸ್ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 283 ರನ್ ಗಳಿಸಿತ್ತು.ಈ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಆರಂಭದಲ್ಲೇ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು.