ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಿನ್ನೆ ರಾತ್ರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್ ಗಳ ಹೀನಾಯ ಸೋಲಾಗಿದೆ. ಜತೆಗೆ ಸರಣಿಯನ್ನೂ ಕಳೆದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 190 ರನ್ ಗಳ ಬೃಹತ್ ಮೊತ್ತವನ್ನೇ ಪೇರಿಸಿತ್ತು. ಭಾರತವೂ ಆಸ್ಟ್ರೇಲಿಯಾವನ್ನು ಆರಂಭದಲ್ಲಿ ನಿಯಂತ್ರಿಸಿ ಗೆಲುವಿನ ಭರವಸೆ ಮೂಡಿಸಿತ್ತು.ಆದರೆ ಮಧ್ಯಮ ಕ್ರಮಾಂಕದಲ್ಲಿ ಗ್ಲೆನ್ ಮ್ಯಾಕ್ಸ್ ವೆಲ್