ಬಾರ್ಬಡೋಸ್: ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಪ್ರಯೋಗ ಮಾಡಿ ಕೈ ಸುಟ್ಟುಕೊಂಡಿರುವ ಟೀಂ ಇಂಡಿಯಾ ಮೂರನೇ ಏಕದಿನ ಪಂದ್ಯದಲ್ಲಿ ಪ್ರಬಲ ಪಡೆಯನ್ನೇ ಕಣಕ್ಕಿಳಿಸುವ ಸಾಧ್ಯತೆಯಿದೆ.ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್, ಕೊಹ್ಲಿ ಆಡಿದ್ದರೂ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆಯಾಗಿತ್ತು. ಕೊಹ್ಲಿಗೆ ಬ್ಯಾಟಿಂಗ್ ಅವಕಾಶವೇ ಸಿಕ್ಕಿರಲಿಲ್ಲ. ಎರಡನೇ ಏಕದಿನ ಪಂದ್ಯದಲ್ಲಿ ಇಬ್ಬರೂ ಹಿರಿಯ ಆಟಗಾರರು ಆಡಿರಲಿಲ್ಲ.ಆದರೆ ಈಗ ಸರಣಿ 1-1 ರಿಂದ ಸಮಬಲಗೊಂಡಿದ್ದು ಅಂತಿಮ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡವಿದೆ.