ಕೊಲೊಂಬೊ: ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ ರೋಚಕ ಗೆಲುವು ಸಾಧಿಸಿ ಫೈನಲ್ ಗೆ ಲಗ್ಗೆಯಿಟ್ಟಿದೆ. ನಿನ್ನೆ ನಡೆದ ರೋಚಕ ಹಣಾಹಣಿಯಲ್ಲಿ ಶ್ರೀಲಂಕಾ ತಂಡವನ್ನು 41 ರನ್ ಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಸ್ಪಿನ್ನರ್ ಗಳ ದಾಳಿಗೆ ತತ್ತರಿಸಿ 213 ರನ್ ಗಳಿಗೆ ಆಲೌಟ್ ಆಗಿತ್ತು. ತಿರುವು ಪಡೆಯುತ್ತಿದ್ದ ಪಿಚ್ ನಲ್ಲಿ ಭಾರತೀಯ ಬೌಲರ್ ಗಳೂ ಕಠಿಣ ಸ್ಪರ್ಧೆಯೊಡ್ಡಬಹುದು ಎಂದು ಎಲ್ಲರ