ಧರ್ಮಶಾಲಾ: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಟಿ20 ಪಂದ್ಯವನ್ನು 6 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್ ಮಾಡಿದೆ. ಇದರ ಜೊತೆಗೆ ಹೊಸ ದಾಖಲೆಯನ್ನೂ ಮಾಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಲಂಕಾ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 146ರನ್ ಗಳಿಸಿತ್ತು. ಈ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾಕ್ಕೆ ನಾಯಕ ರೋಹಿತ್ ಶರ್ಮಾ 5 ರನ್ ಗೆ ವಿಕೆಟ್ ಒಪ್ಪಿಸುವ ಮೂಲಕ ಆಘಾತ ನೀಡಿದರು.