ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಇಂದು ಟೀಂ ಇಂಡಿಯಾ ಆಯ್ಕೆ ಮಾಡಲಿದ್ದು, ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ ಮರಳುವ ನಿರೀಕ್ಷೆಯಿದೆ.ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಗೆದ್ದ ಬಳಿಕ ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿದ್ದ ಕೊಹ್ಲಿ ಇದೀಗ ಮರಳಿ ತಂಡ ಕೂಡಿಕೊಳ್ಳುವ ನಿರೀಕ್ಷೆಯಿದೆ. ಆದರೆ ಕಿವೀಸ್ ವಿರುದ್ಧ ತಂಡವನ್ನು ಮುನ್ನಡೆಸಿದ್ದ ರೋಹಿತ್ ಶರ್ಮಾಗೆ ವಿಶ್ರಾಂತಿ ಸಿಗುವ ಸಾಧ್ಯತೆಯಿದೆ.ಇನ್ನು, ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್, ಅಜಿಂಕ್ಯಾ ರೆಹಾನೆ ತಂಡಕ್ಕೆ ಮರಳುವ