ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅತಿಥೇಯ ಬೌಲರ್ ಗಳನ್ನು ಬೆಂಡಾಡಿ 348 ರನ್ ಗಳ ಬೃಹತ್ ಗೆಲುವಿನ ಗುರಿ ನೀಡಿದೆ.ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಭಾರತದ ಪರ ಎಲ್ಲಾ ಬ್ಯಾಟ್ಸ್ ಮನ್ ಗಳಿಂದಲೂ ಉತ್ತಮ ಜತೆಯಾಟವೇ ಬಂತು. ಆರಂಭಿಕರಾಗಿ ಇದೇ ಮೊದಲ ಬಾರಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್, ಪೃಥ್ವಿ ಶಾ ನಿಧಾನದ ಆದರೆ ಭದ್ರ ಅಡಿಪಾಯ ಹಾಕಿಕೊಟ್ಟರು. ಆದರೆ