ಇಂಧೋರ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯವೂ ಮೂರೇ ದಿನಕ್ಕೆ ಮುಕ್ತಾಯವಾಗುವುದು ಖಚಿತವಾಗಿದೆ.ದ್ವಿತೀಯ ಇನಿಂಗ್ಸ್ ನಲ್ಲಿ 88 ರನ್ ಗಳ ಹಿನ್ನಡೆಯೊಂದಿಗೆ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಇಂದು 163 ರನ್ ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆಸೀಸ್ ಗೆ 76 ರನ್ ಗಳ ಗೆಲುವಿನ ಗುರಿ ಸಿಕ್ಕಿದೆ.ಭಾರತದ ಪರ ದ್ವಿತೀಯ ಇನಿಂಗ್ಸ್ ನಲ್ಲಿ ಏಕಾಂಗಿ ಹೋರಾಟ ನಡೆಸಿದ ಚೇತೇಶ್ವರ ಪೂಜಾರ